Select Your Language

Notifications

webdunia
webdunia
webdunia
webdunia

ಗರ್ಭಗುಡಿಯಲ್ಲಿ ನಿಂತು 'ರಾಮಲಲ್ಲಾ'ನಿಗೆ ಅರತಿ ಬೆಳಗಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Ayodhye

Sampriya

ಅಯೋಧ್ಯೆ , ಗುರುವಾರ, 2 ಮೇ 2024 (15:36 IST)
Photo Courtesy X
ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಅಯೋಧ್ಯೆಗೆ ತೆರಳಿ ಗರ್ಭಗುಡಿಯಲ್ಲಿ ನಿಂತು ರಾಮಲಲ್ಲಾನಿಗೆ ಅರತಿ ಬೆಳಗಿ ದರ್ಶನ ಪಡೆದರು.

ಅಯೋಧ್ಯೆಯಲ್ಲಿ ಜನವರಿಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನಡೆದಿತ್ತು. ಈ ಕೈಂಕರ್ಯವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಾಗಿತ್ತು. ಈ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿತ್ತು.

ಮಾತ್ರವಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ನಾಯಕರು, ಪ್ರತಿಷ್ಠಾಪನೆಯನ್ನು ದೇಶದ ಮೊದಲ ಪ್ರಜೆ ರಾಷ್ಟ್ರಪತಿಯವರ ಅವರಿಂದ ನೆರವೇರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದರು. ಅಲ್ಲದೆ ಬುಡಗಟ್ಟು ಸಮುದಾಯದವರು ಎಂಬ ಕಾರಣಕ್ಕಾಗಿ ಅವರನ್ನು ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಲೋಕಸಭೆ ಪ್ರಚಾರ ಸಭೆಯಲ್ಲೂ ಕಾಂಗ್ರೆಸ್ ಈ ವಿಚಾರವನ್ನು ಪ್ರಸ್ತಾಪಿಸಿ ಪ್ರಧಾನಿಯನ್ನು ಟೀಕಿಸಿತ್ತು.

ಇದರ ಬೆನ್ನಲ್ಲೇ ಇದೀಗ  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಭೇಟಿ ನೀಡಿ ಶ್ರೀ ರಾಮಲಲಾನ ದರ್ಶನ ಪಡೆದು ಆರತಿ ಬೆಳಗಿ, ಪ್ರಾರ್ಥನೆ ಸಲ್ಲಿಸಿದರು.

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಚಂದ್ರನ ದರ್ಶನ ಪಡೆಯುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಹನುಮಾನ್‌ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಸರಯೂ ಘಾಟ್‌ನಲ್ಲಿ ವಿಶೇಷ ಪೂಜೆಯೊಂದಿಗೆ ಗಂಗಾ ಆರತಿ ಕಾರ್ಯಕ್ರಮದಲ್ಲೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಕಾಲಿಗೆ ಬಿದ್ದ ಗೀತಾ ಶಿವರಾಜ್ ಕುಮಾರ್