Select Your Language

Notifications

webdunia
webdunia
webdunia
webdunia

ಇಂದಿನಿಂದ ಶಾಲೆಗಳು ಆರಂಭ : ಶಿಕ್ಷಕ-ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ

ಇಂದಿನಿಂದ ಶಾಲೆಗಳು ಆರಂಭ : ಶಿಕ್ಷಕ-ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ
ಬೆಂಗಳೂರು , ಸೋಮವಾರ, 23 ಆಗಸ್ಟ್ 2021 (09:25 IST)
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಎಂದು ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.ಸಚಿವರು ತಮ್ಮ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಬೇಕು. ಶಿಕ್ಷಕರನ್ನು ಪ್ರೋತ್ಸಾಹಿಸಿ, ಶಾಲೆಗಳಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಬೇಕು. ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.
ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದು ಸಲಹೆ ನೀಡುತ್ತೇನೆ.
ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸುವಂತೆ ಪಾಲಕರು ಮತ್ತು ಪೋಷಕರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಲಸೆ ಹೋದ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್