Publish Date: Sat, 07 Apr 2018 (12:46 IST)
Updated Date: Sat, 07 Apr 2018 (12:47 IST)
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿ ನಡೆಯುತ್ತಿದೆ.
ಬಿಜೆಪಿ ನಾಯಕರಾದ ಪ್ರಕಾಶ್ ಜಾವೇಡ್ಕರ್, ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಖಾಸಗಿ ರೆಸಾರ್ಟ್ ನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಮುಂದಿನ ವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಸಲ್ಲಿಸಲಿದ್ದಾರೆ.
ಇಂದಿನ ಸಭೆಯಲ್ಲಿ ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳ, ಅಸಮಾಧಾನವಿರುವ ಕ್ಷೇತ್ರಗಳ ಕುರಿತಾಗಿ ಪ್ರಮುಖವಾಗಿ ಚರ್ಚೆಯಾಗುತ್ತಿದೆ ಎನ್ನಲಾಗಿದೆ. ಈ ನಾಯಕರು ಸಭೆಯಲ್ಲಿ ಕೈಗೊಳ್ಳುತ್ತಿರುವ ನಿರ್ಧಾರವನ್ನು ಹೈಕಮಾಂಡ್ ಗೆ ವರದಿ ಸಲ್ಲಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.