Publish Date: Sat, 28 Oct 2017 (10:09 IST)
Updated Date: Sat, 28 Oct 2017 (10:17 IST)
ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ.
ಮುಂಬರುವ ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಜತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ. ಆದರೆ ಯಾವಾಗ, ಎಲ್ಲಿ ಎಂದು ಇನ್ನೂ ಸಮಯ, ಸ್ಥಳ ನಿಗದಿಯಾಗಿಲ್ಲ ಎನ್ನಲಾಗಿದೆ.
ಪರಿವರ್ತನಾ ರ್ಯಾಲಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರು ಸಲಹೆ ಪಡೆಯಲಿದ್ದಾರೆ. ನಾಳೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಧರ್ಮಸ್ಥಳ ಭೇಟಿ ಬಳಿಕ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸೌಂದರ್ಯ ಲಹರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೀದರ್ ನಲ್ಲಿ ರೈಲ್ವೇ ಮಾರ್ಗ ಉದ್ಘಾಟಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ