Daily Horoscope

Select Your Language

Notifications

webdunia
webdunia
webdunia
webdunia

ಫೆಬ್ರವರಿ 6ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನಲೆ; ಸಿಎಂ ನಿವಾಸಕ್ಕೆ ಶಾಸಕರು ಭೇಟಿ

ಬೆಂಗಳೂರು
ಬೆಂಗಳೂರು : ಫೆಬ್ರವರಿ 6ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ  ಸಿಎಂ ಬಿಎಸ್ ವೈ ನಿವಾಸಕ್ಕೆ ಬಿಜೆಪಿ ಶಾಸಕರ ದಂಡು ಭೇಟಿ ನೀಡುತ್ತಿದೆ.


ಇಂದು ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೇಕಾರ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ  ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿ  ಸಚಿವ ಸ್ಥಾನ ನೀಡುವಂತೆ ಸಿಎಂ ಬಳಿ ಪಟ್ಟುಹಿಡಿದಿದ್ದಾರೆ ಎನ್ನಲಾಗಿದೆ. ಹಾಗೇ ಇಂದು ಹೆಚ್.ವಿಶ್ವನಾಥ್ ಅವರು ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

 

ಹಾಗೇ ಸಚಿವ ಸ್ಥಾನ ಪಕ್ಕಾ ಆದ ಹಿನ್ನಲೆಯಲ್ಲಿ ಶಾಸಕ ನಾರಾಯಣಗೌಡ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ  ಸಿಎಂ ಬಿಎಸ್ ವೈ ನಿವಾಸಕ್ಕೆ ಭೇಟಿ ನೀಡಿ  ಧನ್ಯವಾದ ತಿಳಿಸಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ- ಭೈರತಿ ಬಸವರಾಜ್