Publish Date: Thu, 30 Nov 2017 (09:42 IST)
Updated Date: Thu, 30 Nov 2017 (09:44 IST)
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡರು. ಆದರೆ ರಾಜ್ಯದ ಕಾಂಗ್ರೆಸ್ ನಾಯಕರು ಮಾತ್ರ ಹುಟ್ಟುಹಬ್ಬಕ್ಕೆ ಶುಭಾಷಯ ಬಿಡಿ, ರಮ್ಯಾ ಉಸಾಬರಿಯೇ ಬೇಡ ಎಂದಿದ್ದಾರೆ.
ರಮ್ಯಾ ಚುನಾವಣೆಗೆ ನಿಲ್ಲುತ್ತಾರೆ ಎಂದೆಲ್ಲಾ ಸುದ್ದಿಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಬಳಿ ರಮ್ಯಾ ಮಂಡ್ಯ ಟಿಕೆಟ್ ಗೆ ಮನವಿ ಮಾಡಿದ್ದಾರೆ ಎಂಬ ಸುದ್ದಿಯೂ ಇತ್ತು. ಆದರೆ ಈ ಬಗ್ಗೆ ರಾಜ್ಯ ನಾಯಕರನ್ನು ಕೇಳಿದರೆ ನಮಗೆ ಏನೂ ಗೊತ್ತಿಲ್ಲ ಎನ್ನುತ್ತಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ‘ರಮ್ಯಾ ಎಲ್ಲಿದ್ದಾರೆಂದೇ ನಮಗೆ ಗೊತ್ತಿಲ್ಲ. ಅವರ ರಾಜಕೀಯ ಭವಿಷ್ಯದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ