Publish Date: Thu, 02 Jan 2020 (11:16 IST)
Updated Date: Thu, 02 Jan 2020 (11:19 IST)
ಬೆಂಗಳೂರು : ಇಂದು ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಟ್ವೀಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಡಾ.ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಏಕೆ ಬರಲಿಲ್ಲ? ಶಿವಕುಮಾರ್ ಶ್ರೀಗಳಿಗೆ ‘ಭಾರತ ರತ್ನ’ಗೌರವ ಏಕೆ ನೀಡಿಲ್ಲ? ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡದಿರುವುದೇಕೆ?ನೆರೆ ಸಂತ್ರಸ್ತರಿಗೆ ಏಕೆ ಮಧ್ಯಂತರ ಪರಿಹಾರ ನೀಡಲಿಲ್ಲ? ರಾಜ್ಯಕ್ಕೆ ಜಿಎಸ್ಟಿ ಪಾಲನ್ನು ಸಮರ್ಪಕವಾಗಿ ನೀಡದಿರುವುದೇಕೆ? ನರೇಗಾ ಯೋಜನೆಯ ಬಾಕಿ ಹಣವನ್ನು ಇನ್ನೂ ಏಕೆ ನೀಡಿಲ್ಲ? ಅನುದಾನ ಹಂಚಿಕೆಯಲ್ಲಿ ಕರ್ನಾಟಕವನ್ನು ಕಡೆಗಣಿಸಿರುವುದೇಕೆ?
ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರದಲ್ಲಿ ಗೊಂದಲವೇಕೆ? ನೀವು ನಿಮ್ಮದೇ ಪಕ್ಷದ ಶಾಸಕರ ಹೇಳಿಕೆ ಖಂಡಿಸುತ್ತಿಲ್ಲವೇಕೆ? ಎಲ್ಲಾ ಭಾಷೆಗಳಿಗೆ ಸಮಾನ ಸ್ಥಾನಮಾನ ನೀಡದಿರುವುದೇಕೆ? ಎಂದು ಸರಣಿ ಡ್ವೀಟ್ ಮೂಲಕ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ.