ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನ ಕೊಟ್ಟ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ನಾವು ಹಿಂದೆ 25 ಲೋಕಸಭೆ ಸೀಟ್ ಗೆದ್ದಿದ್ವಿ. ಈ ಸಲವೂ ಅಷ್ಟೇ ಸೀಟ್ ಗೆದ್ದು ಮೋದಿಯವರು ಮತ್ತೆ ಪ್ರಧಾನಿ ಮಾಡಲು ಸಹಕರಿಸುತ್ತೇವೆ ಎಂದು ಹೇಳಿದರು.