Select Your Language

Notifications

webdunia
webdunia
webdunia
webdunia

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಬೊಮ್ಮಾಯಿ

Halehuballi Riot Case

Sampriya

ಹುಬ್ಬಳ್ಳಿ , ಭಾನುವಾರ, 13 ಅಕ್ಟೋಬರ್ 2024 (14:05 IST)
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ನಡೆಸುತ್ತಿದೆ. ಹೀಗಿರುವಾಗ ರಾಜ್ಯ ಸರ್ಕಾರಕ್ಕೆ ಪ್ರಕರಣ ಹಿಂಪಡೆಯುವ ಅಧಿಕಾರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೇಶದ್ರೋಹ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯುವ ನಿರ್ಧಾರ ಮಾಡಿದ್ದು ಸರಿಯಲ್ಲ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದಾರೆ ಎಂದರೆ ರಾಜ್ಯದ ಮೇಲೆ ದಾಳಿ ಮಾಡಿದ್ದಾರೆ ಎಂದರ್ಥ. ಇದು ಗಂಭೀರ ಪ್ರಕರಣವೆಂದು ಪರಿಗಣಿಸಿ ಎನ್‌ಐಎಗೆ ವಹಿಸಿದ್ದು, ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಹ ಸಲ್ಲಿಕೆ ಆಗಿದೆ. ಎನ್‌ಐಎಗೆ ನೀಡಿರುವ ಪ್ರಕರಣ ಯಾವುದೇ ಕಾರಣಕ್ಕೂ ವಾಪಸ್ ಪಡೆಯಲು ಬರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಗಲಭೆ ಪ್ರಕರಣ ಹಿಂಪಡೆಯುವ ನಿರ್ಧಾರದ ಮೂಲಕ ರಾಜ್ಯ ಸರ್ಕಾರ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ, ಮಂಗಳೂರಿನಲ್ಲಿ ನಡೆದ ಗಲಭೆ, ಹಳೇಹುಬ್ಬಳ್ಳಿ ಗಲಭೆಗಳಲ್ಲಿ ಉದ್ರಿಕ್ತರು ಪೊಲೀಸ್‌ ಠಾಣೆಗಳ ಮೇಲೆ ದಾಳಿ ನಡೆಸಿದ್ದಾರೆ. ಇನ್ನು ಮುಂದೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ಎಂದು ಬೊಮ್ಮಾಯಿ ಪ್ರಶ್ನಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ರಾಜ್ಯ ಸರ್ಕಾರ ತನ್ನ ರಕ್ಷಣೆಗಷ್ಟೇ ಮುಂದಾಗಿರುವುದರಿಂದ, ಬಾಲಿಶವಾಗಿ ವರ್ತಿಸುತ್ತಿದೆ. ತನ್ನ ತಪ್ಪು ಹಾಗೂ ಹಗರಣಗಳನ್ನು ಮುಚ್ಚಿಕೊಳ್ಳಲು ಇಂತಹ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಚಿವ ಬಾಬಾ ಸಿದ್ದಿಕ್ ಹತ್ಯೆ ಪೂರ್ವ ನಿಯೋಜಿತ: ಬಿಷ್ಣೋಯ್ ಗ್ಯಾಂಗ್​ ಕೈವಾಡದ ಶಂಕೆ