ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಹೊಣೆಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ಗೆ ತಿರುಗೇಟು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿ ಅಂದರೆ ಬುರುಡೆ ಜನರ ಪಕ್ಷ. ಸುಳ್ಳು ಹೇಳುವುದರಲ್ಲಿ ಇವರನ್ನು ಬಿಟ್ರೆ ಬೇರೆ ಯಾರು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಗೂಬೆ ಕೂರಿಸುತ್ತಿದೆ. ಬಿಜೆಪಿ ನಾಯಕರು ಎಷ್ಟು ದಿನ ಈ ರೀತಿ ಬೂಟಾಟಿಕೆ ರಾಜಕೀಯ ಮಾಡುತ್ತೀರಿ? ಕೇಂದ್ರ ರೈಲ್ವೆ ಸಚಿವರಿಗೂ ಸುಳ್ಳಿನ ಸರದಾರ ಎಂಬ ಕುಖ್ಯಾತಿ ನೀಡಿದ ಕೀರ್ತಿ ಬಿಜೆಪಿಗೆಗೆ ಸಲ್ಲುತ್ತದೆ ಎಂದರು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಎಲ್ಲಾ ಮೆಟ್ರೋಗಳು ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಡಿ ಬರುತ್ತದೆ. ಮೆಟ್ರೋಗಳಿಗೆ ಸಂಬಂಧಿಸಿದಂತೆ ಬೋರ್ಡ್ ಇರುತ್ತದೆ. ದರ ಏರಿಕೆಗೆ ರಾಜ್ಯಗಳು ಕೇಂದ್ರಕ್ಕೆ ಪತ್ರ ಬರೆಯುತ್ತದೆ. ಪತ್ರ ಬರೆದ ಮೇಲೆ ಸಮಿತಿ ರಚನೆ ಮಾಡುತ್ತಾರೆ. ರಾಜ್ಯ ಸರ್ಕಾರಕ್ಕೂ ಮೆಟ್ರೋ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.