ಆಂದ್ರಪ್ರದೇಶ ಮಾದರಿಯಲ್ಲಿ ಎಂ ಸ್ಯಾಂಡ್ ನೀತಿಯಲ್ಲಿ ಕೆಲವು ಬದಲಾವಣೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಆಂದ್ರಪ್ರದೇಶ ಮಾದರಿಯಲ್ಲಿ ಎಂ ಸ್ಯಾಂಡ್ ನೀತಿಯಲ್ಲಿ ಕೆಲವು ಬದಲಾವಣೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಉಪಸಮಿತಿ ನೀಡಿರುವ ಎಂ ಸ್ಯಾಂಡ್ ನೀತಿಯಲ್ಲಿ ಮುಂದಿನ ಸಚಿವ ಸಂಪುಟದಲ್ಲಿ ಬದಲಾವಣೆಯೊಂದಿಗೆ ಒಪ್ಪಿಗೆ ನೀಡಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಎಂ ಸ್ಯಾಂಡ್ ಉತ್ಪಾದನೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಈಗಾಗಲೇ 36 ಪ್ರದೇಶದಲ್ಲಿ ಎಂ ಸ್ಯಾಂಡ್ ಉತ್ವಾದನೆ ಮಾಡಲಾಗುತ್ತಿದೆ. ಇನ್ನೂ 94 ಕಡೆ ಉತ್ಪಾದನೆ ಜಾಗ ಗುರುತಿಸಲಾಗಿದ್ದು, ಅನುಮತಿ ನೀಡಿಲ್ಲ ಎಂದು ತಿಳಿಸಿದರು.
ಎಂ ಸ್ಯಾಂಡ್ ಉತ್ಪಾದನೆ ಮಾಡಲು 6500 ಅರ್ಜಿಗಳು ಬಂದಿವೆ. ಆದಷ್ಟು ಬೇಗ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ನಡೆಯಲಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.