ಬೆಂಗಳೂರು : ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದ್ದು, ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಈಗಾಗಲೇ ಕೆಲವೆಡೆ ಬಿತ್ತನೆ ಪ್ರಾರಂಭವಾಗಿದ್ದು, ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
 
 			
 
 			
			                     
							
							
			        							
								
																	ಕೆಲವೆಡೆ ಕುಡಿಯುವ ನೀರಿಗೆ ಸಮಸ್ಯೆಯುಂಟಾಗಿದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.