Webdunia - Bharat's app for daily news and videos

Install App

ಏಕಕಾಲಕ್ಕೆ 1280 ನೌಕರರ ವರ್ಗಾವಣೆಗೆ ಸರಕಾರ ಆದೇಶ

Webdunia
ಬುಧವಾರ, 20 ಜುಲೈ 2016 (17:16 IST)
ಒಂದೇ ವಿಭಾಗದಲ್ಲಿ ಮೂರು ವರ್ಷ ಸೇವೆ ಸಲ್ಲಿಸಿರುವ ಒಟ್ಟು 1280 ನೌಕರರನ್ನು ಏಕಕಾಲಕ್ಕೆ ವರ್ಗಾವಣೆಗೊಳಿಸಲು ಬಿಬಿಎಂಪಿ ಸಿದ್ದತೆ ನಡೆಸಿದೆ. ಈ ಒಂದು ವರ್ಗಾವಣೆ ರಾಜ್ಯದ ಇತಿಹಾಸದಲ್ಲಿಯೇ ದೊಡ್ಡ ವರ್ಗಾವಣೆ ಎಂದು ದಾಖಲಾಗಲಿದೆ.
 
ಈ ಕುರಿತು ಬಿಬಿಎಂಪಿ ಆಯಕ್ತ ಮಂಜುನಾಥ್ ಪ್ರಸಾದ್‌ ಅವರಿಗೆ ಬಿಬಿಎಂಪಿ ವಿಶೇಷ ಆಯುಕ್ತೆ ರಶ್ಮೀ ಮಹೇಶ್ ಅವರಿಂದ ವರ್ಗಾವಣೆ ಪಟ್ಟಿ ರವಾನೆ ಮಾಡಿದ್ದಾರೆ ಎನ್ನಲಾಗಿದೆ.
 
ಬಿಬಿಎಂಪಿ ಮೇಯರ್ ಅವರು ಸಹ ಇದಕ್ಕೆ ಸಮ್ಮತಿಸಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಆಯುಕ್ತರ ಅಂತಿಮ ಸಹಿ ಮಾತ್ರ ಬಾಕಿ ಉಳಿದಿದೆ ಎಂದು ಮೂಲಗಳು ತಿಳಿಸಿವೆ.
 
ಬೆಂಗಳೂರು ಹೊರ ವಲಯದ ಅಧಿಕಾರಿಗಳನ್ನು ಕೇಂದ್ರ ವಲಯಕ್ಕೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದ್ದು, ಕೇಂದ್ರ ವಲಯದ ಅಧಿಕಾರಿಗಳನ್ನು ಬಿಬಿಎಂಪಿ ಪ್ರಮುಖ ವಿಭಾಗಗಳಿಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments