Publish Date: Tue, 12 Nov 2024 (16:59 IST)
Updated Date: Tue, 12 Nov 2024 (17:04 IST)
ಬೆಂಗಳೂರು: ವಾಲ್ಮೀಕಿ, ಮುಡಾ ಹಾಗೂ ಇದೀಗ ವಕ್ಫ್ ವಿವಾದ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆರೋಪ ಮಾಡುತ್ತಿರುವ ಬೆನ್ನಲ್ಲೇ ಬಿಜೆಪಿಯ ಏಟಿಗೆ ಎದುರೇಟು ಕೊಡಲು ರಾಜ್ಯ ಸರ್ಕಾರ ಮುಂದಾಗಿದೆ.
ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಅಕ್ರಮದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಲು ಆದೇಶಿಸಿದೆ ಎಂದು ತಿಳಿದು ಬಂದಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಮಾನವಕೃಷಿ ಸಾಂಸ್ಕೃತಿಕ ಸಂಘದಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಕ.ಕ.ಪ್ರ.ಮಂಡಳಿ ಅಕ್ರಮದ ವರದಿ ನೀಡುವಂತೆ ಅಪರ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದ್ದು, 15 ದಿನದೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಕೃಷಿ ಸಾಂಸ್ಕೃತಿಕ ಸಂಘದ ಅವ್ಯವಹಾರದ ಬಗ್ಗೆ ತನಿಖೆಗೆ ನಿವೃತ್ತ ಐಎಎಸ್ ಸುಧೀರ್ ಕುಮಾರ್ ಅವರನ್ನು ನೇಮಕ ಮಾಡಿದ್ದು, ಇದರ ವರದಿಯನ್ನು ಆರು ತಿಂಗಳೊಳಗೆ ಸಲ್ಲಿಸುವಂತೆ ತಾಕೀತು ನೀಡಲಾಗಿದೆ.
ಅಭಿವೃದ್ಧಿ ವಿಚಾರಕ್ಕೆ ನೀಡಿದ್ದ ಹಣದಲ್ಲಿ ಅಕ್ರಮ ನಡೆದಿರುವ ಆರೋಪವಿದ್ದು, ಸರ್ಕಾರದ ಆದೇಶ ನಿಯಮಗಳನ್ನ ಗಾಳಿಗೆ ತೂರಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.