Select Your Language

Notifications

webdunia
webdunia
webdunia
webdunia

ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರಕಾರ

ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡಿದ ರಾಜ್ಯ ಸರಕಾರ
ಬೆಂಗಳೂರು , ಸೋಮವಾರ, 29 ಜುಲೈ 2019 (09:55 IST)
ಬೆಂಗಳೂರು : ಇಂದು ನಡೆಯಬೇಕಿದ್ದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.




ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯ ಬೇಕಾಗಿತ್ತು, ಆದರೆ ಚುನಾವಣೆಯನ್ನು ಮುಂದೂಡುವಂತೆ ಕೆಎಂಎಫ್ ನ ಹಾಲಿ ಅಧ್ಯಕ್ಷ ನಾಗರಾಜ್ ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಇದೀಗ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರಕಾರ ಆದೇಶಿಸಿದೆ.


ಈಗಾಗಲೇ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಹಾಗೂ ಜೆಡಿಎಸ್ ನ ಶಾಸಕ ಎಚ್.ಡಿ ರೇವಣ್ಣ ಲಾಬಿ ನಡೆಸುತ್ತಿದ್ದಾರೆ. ಅಲ್ಲದೇ ರೇವಣ್ಣ ನಾಲ್ವರು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನ ಹೈಜಾಕ್ ಮಾಡಿ ತಮ್ಮತ್ತ ಸೆಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಥರ್ಡ್ ಪ್ಲೇಸ್ ಬಂದವರು ಫಸ್ಟ್ ಪ್ಲೇಸ್‍ ಗೆ ಬಂದರು – ಜೆಡಿಎಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ