Select Your Language

Notifications

webdunia
webdunia
webdunia
webdunia

ಅಧಿಕಾರಿಗಳ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಜಿ.ಪರಮೇಶ್ವರ್

ಅಧಿಕಾರಿಗಳ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಜಿ.ಪರಮೇಶ್ವರ್
ನವದೆಹಲಿ , ಗುರುವಾರ, 21 ಜುಲೈ 2016 (11:12 IST)
ರಾಜ್ಯ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. 
 
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಇಲಾಖೆಯಲ್ಲಿ ಆತ್ಮಹತ್ಯೆ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರಿಗೆ ಮನೋವಿಜ್ಞಾನಿಗಳಿಂದ ಕೌನ್ಸ್‌ಲಿಂಗ್ ನಡೆಸುತ್ತೇವೆ. ಯೋಗ, ಧ್ಯಾನಗಳ ಮೂಲಕ ಪೊಲೀಸರ ಒತ್ತಡವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುಲಾಗುತ್ತದೆ ಎಂದು ತಿಳಿಸಿದರು.
 
ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಪ್ರಸ್ತಾಪದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಅವರು ತಮ್ಮ ವೈಯಕ್ತಿಕ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕೇಂದ್ರ ಸಂಸಧೀಯ ಸಚಿವ ಮಲ್ಲಿಕಾರ್ಜುನ್ ಖರ್ಗೆ ಕುರಿತು ಮಾತನಾಡುವ ಸಮಯದಲ್ಲಿ ಅವರು ದಲಿತ ಮುಖ್ಯಮಂತ್ರಿ ಪ್ರಸ್ತಾಪವನ್ನು ಮಾಡಿದ್ದಾರೆ. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ  

Share this Story:

Follow Webdunia kannada

ಮುಂದಿನ ಸುದ್ದಿ

ಬಾದಾಮಿಯಲ್ಲಿ ರೈತ ಹುತಾತ್ಮ ದಿನಾಚರಣೆ: ಕೋಡಿಹಳ್ಳಿ ಚಂದ್ರಶೇಖರ್