ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಆರೋಪಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಈ ಕುರಿತು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ನಡೆಯಬೇಕು. ಈ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಎಬಿವಿಪಿ ಸಂಘಟನೆಯನ್ನು ತಪ್ಪು ದಾರಿಗೆ ಒಯ್ಯುತ್ತಿಲ್ಲ. ದಾರಿ ತಪ್ಪಿಸುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರು. ಎಬಿವಿಪಿ ದೇಶ ಭಕ್ತಿಯ ಸಂಘಟನೆ ಎಂದು ಅರಿಯಬೇಕು ಎಂದು ಕೇಂದ್ರ ಸಚಿವ ಅನಂತ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ