Publish Date: Mon, 04 Nov 2024 (20:16 IST)
Updated Date: Mon, 04 Nov 2024 (20:19 IST)
ಬೆಂಗಳೂರು: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳದ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿ, ಗಡುವು ವಿಸ್ತರಣೆ ಮಾಡಿದೆರ. ಈಗಾಗಲೇ ರಾಜ್ಯ ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ.
ಇದೀಗ ನವೆಂಬರ್ 30ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಆದರೆ ಇದುವರೆಗೆ1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿರುವುದು ವರದಿಯಾಗಿದೆ.
ಇನ್ನುಳಿದವರು ವಾಹನಕ್ಕೆ ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಇದೀಗ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ. ಒಂದು ವೇಳೆ ನವೆಂಬರ್ 30ರ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಿದ್ದಲ್ಲಿ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.