Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಸಲು ಕ್ಯಾಬಿನೆಟ್ ದುರುಪಯೋಗಿಸುತ್ತಿದೆ: ಜಗದೀಶ್ ಶೆಟ್ಟರ್

MP Jagadish Shettar, Hubballi Clash Case, Chief Minister Siddaramaiah

Sampriya

ಬೆಳಗಾವಿ , ಶನಿವಾರ, 12 ಅಕ್ಟೋಬರ್ 2024 (15:13 IST)
ಬೆಳಗಾವಿ: ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಮತ ಗಟ್ಟಿಗೊಳಿಸುವ ಸಲುವಾಗಿ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಾಸ್ ಪಡೆಯುವ ನಿರ್ಣಯ ಕೈಗೊಂಡು,  ಕಾನೂನುಬಾಹಿರ ಕೆಲಸ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.

ಇಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮೂಲಕ ಕಾಂಗ್ರೆಸ್ ಕ್ಯಾಬಿನೆಟ್‌ ದುರುಪಯೋಗ ಪಡಿಸಿಕೊಂಡಿದೆ. ಇದೊಂದು ಗಂಭೀರ ಪ್ರಕರಣ.  ಈ ಪ್ರಕರಣ ಹಿಂದಕ್ಕೆ ಪಡೆಯುವ ಕುರಿತಾಗಿ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ವಾಪಸ್‌ ಪಡೆಯದಿದ್ದರೆ, ಬಿಜೆಪಿಯಿಂದ ಉಗ್ರಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಗೃಹ ಇಲಾಖೆ ಮೂಲಕ ಸಿದ್ದರಾಮಯ್ಯ ಈ ವಿಷಯವನ್ನು ಸಂಪುಟದ ಗಮನಕ್ಕೆ ತಂದಿದ್ದಾರೆ. ಆ ಕಡತದಲ್ಲಿರುವ ವಿಚಾರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ ಅವರು, ಈ ಹಿಂದೆಯೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಫ್‌ಐ ಮೇಲಿನ ಪ್ರಕರಣ ಹಿಂದಕ್ಕೆ ಪಡೆದಿತ್ತು. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು ಎಂದು ಆರೋಪಿಸಿದರು.

ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ಅವರು, ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕ ಹಿತಾಸಕ್ತಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾದವರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಆದರೆ, ಈ ಪ್ರಕರಣ ಹಿಂದಕ್ಕೆ ಪಡೆಯುವಂಥದ್ದಲ್ಲ. ಇದನ್ನು ವಾಪಸ್‌ ಪಡೆಯುವುದಾದರೆ, ಮಹದಾಯಿ ಹೋರಾಟದಲ್ಲಿ ರೈತರ ಮೇಲೆ ಪ್ರಕರಣ ಏಕೆ ಹಿಂದಕ್ಕೆ ಪಡೆಯಲಿಲ್ಲ ಎಂದು ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹಳೇ ದ್ವೇಷಕ್ಕೆ ಯುವಕನ ಬರ್ಬರ ಹತ್ಯೆ: ಗುಂಡು ಹಾರಿಸಿ ಆರೋಪಿಗಳ ಬಂಧನ