Select Your Language

Notifications

webdunia
webdunia
webdunia
webdunia

ಕಂಬಳ ಉಳಿಸಲು ರಾಜ್ಯ ಸರಕಾರ ಬದ್ಧವಾಗಿದೆ: ಐವಾನ್ ಡಿಸೋಜಾ

ಕಂಬಳ ಉಳಿಸಲು ರಾಜ್ಯ ಸರಕಾರ ಬದ್ಧವಾಗಿದೆ: ಐವಾನ್ ಡಿಸೋಜಾ
ಮಂಗಳೂರು , ಸೋಮವಾರ, 23 ಜನವರಿ 2017 (12:14 IST)
ಜನಪದ ಕ್ರೀಡೆ ಕಂಬಳವನ್ನು ಉಳಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸರಕಾರದ ಮುಖ್ಯ ಸಚೇತಕ ಐವಾನ್ ಡಿಸೋಜಾ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರಕಾರ ಕಂಬಳದ ಪರವಾಗಿ ಹೈಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಕಂಬಳದ ಸಂಘಟಕರಿಗೆ ರಾಜೋತ್ಸವ ಪ್ರಶಸ್ತಿಯನ್ನು ನೀಡಿದೆ. ಕಂಬಳ ಕ್ರೀಡೆಗೆ ಅನುದಾನದ ಜೊತೆಗೆ ಕಂಬಳ ಓಡಿಸುವವರಿಗೆ ಪಿಂಚಣಿಯನ್ನು ನೀಡುವ ಮೂಲಕ ರಾಜ್ಯ ಸರಕಾರಿ ಕಂಬಳಕ್ಕೆ ಪ್ರೋತ್ಸಾಹ ನೀಡಿದೆ ಎಂದು ವಿವರಿಸಿದರು. 
 
ಸಧ್ಯದ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವ ಜೊತೆ ಮಾತುಕತೆ ನಡೆಸುತ್ತೇನೆ. ಜನವರಿ 30 ರಂದು ಹೈಕೋರ್ಟ್ ತೀರ್ಪಿಗೆ ಕಾಯಲಾಗುವುದು. ಅಗತ್ಯ ಬಿದ್ದರೆ ಸಚಿವ ಸಂಪುಟ ಸಭೆ ಸೇರಿಸಿ ಇದಕ್ಕೆ ಸಂಬಂಧಿಸಿದ ಕಾನೂನು ರಚಿಸಲಾಗುವುದು ಎಂದು ಭರವಸೆ ನೀಡಿದರು.
 
ಕಂಬಳ ಒಂದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆ ಇರುವ ಕ್ರೀಡೆ. ಇದನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಸರಕಾರದ ಮುಖ್ಯ ಸಚೇತಕ ಐವಾನ್ ಡಿಸೋಜಾ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ