Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದಿಂದ ಏರ್‌ಪೋರ್ಟ್‌ಗಳ ನಿರ್ವಹಣೆಗೆ ಚಿಂತನೆ : ಎಂಬಿ ಪಾಟೀಲ್

ರಾಜ್ಯ ಸರ್ಕಾರದಿಂದ ಏರ್‌ಪೋರ್ಟ್‌ಗಳ ನಿರ್ವಹಣೆಗೆ ಚಿಂತನೆ : ಎಂಬಿ ಪಾಟೀಲ್
ಬೆಂಗಳೂರು , ಬುಧವಾರ, 14 ಜೂನ್ 2023 (08:43 IST)
ಬೆಂಗಳೂರು : ರಾಜ್ಯದ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರವೇ ನಿರ್ವಹಣೆ ಮಾಡುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಮಾನ ನಿಲ್ದಾಣಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಆದರೆ ನಿರ್ವಹಣೆಯನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುತ್ತೆ. ಇದರಿಂದ ರಾಜ್ಯ ಸರ್ಕಾರಕ್ಕೆ ನಷ್ಟ ಆಗುತ್ತಿದೆ.

ಇದರಿಂದಾಗಿ ಏರ್ಪೋರ್ಟ್ಗಳ ನಿರ್ವಹಣೆಯನ್ನು ರಾಜ್ಯವೇ ಮಾಡಿದರೆ ಸರ್ಕಾರಕ್ಕೆ ಲಾಭ ಆಗಲಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

2 ವರ್ಷದ ಹಸುಳೆಯನ್ನು ಕತ್ತು ಹಿಸುಕಿ ಕೊಂದ ಪಾಪಿ ತಂದೆ!