Select Your Language

Notifications

webdunia
webdunia
webdunia
webdunia

ಬೆಳಗಾವಿ ಅಧಿವೇಶನದ ಹೊರಗೂ ಒಳಗೂ ಸರ್ಕಾರಕ್ಕೆ ಪ್ರತಿಭಟನೆ ಬಿಸಿ

ಬೆಳಗಾವಿ ಅಧಿವೇಶನದ ಹೊರಗೂ ಒಳಗೂ ಸರ್ಕಾರಕ್ಕೆ ಪ್ರತಿಭಟನೆ ಬಿಸಿ
ಬೆಳಗಾವಿ , ಸೋಮವಾರ, 13 ನವೆಂಬರ್ 2017 (10:21 IST)
ಬೆಳಗಾವಿ: ಇಂದಿನಿಂದ ಉತ್ತರಕರ್ನಾಟಕದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಬೆಳಗಾವಿ ಸುವರ್ಣ ಸೌಧದಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಅರಿವಾಗಲಿದೆ.

 
ಸದನದ ಹೊರಗೆ ಖಾಸಗಿ ವೈದ್ಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬಾಗಲಕೋಟೆಯ ಎಲ್ಲಾ ಖಾಸಗಿ ಆಸ್ಪತ್ರೆ ವೈದ್ಯರು ಆಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ ಮಾಡಲು ತೆರಳಿದ್ದಾರೆ. 400 ಕ್ಕೂ ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಅತ್ತ ಸದನದ ಒಳಗೆ ಪ್ರತಿಭಟನೆ ನಡೆಸಲು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿದ್ಧತೆ ನಡೆಸಿದೆ. ಡಿವೈಎಸ್ ಪಿ ಗಣಪತಿ ಪ್ರಕರಣದಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿದ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಅತ್ತ ಜೆಡಿಎಸ್ ವಿದ್ಯುತ್ ಹಗರಣವನ್ನು ಬಯಲಿಗೆಳೆಯಲು ಲೆಕ್ಕಾಚಾರ ಹಾಕಿದೆ. ಹೀಗಾಗಿ ವಿಶೇಷ ಸದನ ಪ್ರತಿಭಟನೆಯ ಬಿಸಿಯಲ್ಲೇ ಕರಗಿ ಹೋಗದಿದ್ದರೆ ಸಾಕು ಎಂದು ಜನತೆ ಪ್ರಾರ್ಥಿಸುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆನ್ ಲೈನ್ ನಲ್ಲಿ ಕಾಂಡೋಮ್ ದಾಖಲೆಯ ಮಾರಾಟ!