Publish Date: Thu, 18 Aug 2022 (20:18 IST)
Updated Date: Thu, 18 Aug 2022 (20:21 IST)
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಯಡಿಯೂರಪ್ಪನವರು 4 ಬಾರಿ ಮುಖ್ಯಮಂತ್ರಿಯಾದವರು.3 ಬಾರಿ ವಿಪಕ್ಷ ನಾಯಕರಾಗಿದ್ದವರು.ಪಕ್ಷದ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿರುವುದರಿಂದ ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ಮತ್ತು ಲಾಭ ಬಂದಿದೆ.ಅವರ ರಾಜಕೀಯ ಅನುಭವ ಪಕ್ಷಕ್ಕೆ ಲಾಭ ತಂದಿದೆ.ಯಡಿಯೂರಪ್ಪನವರಿಂದ ಕರ್ನಾಟಕವಲ್ಲದೇ ಇಡೀ ದಕ್ಷಿಣಭಾರತಕ್ಕೆ ಲಾಭ ಸಿಗಲಿದೆ.ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನಾವು ಸಾಗ್ತೀವಿ.ಪ್ರಧಾನಿ ಮೋದಿಯವರಿಗೂ ಕೂಡ ಅರುಣ್ ಸಿಂಗ್ ಧನ್ಯವಾದ ತಿಳಿಸಿದ್ದಾರೆ.