Publish Date: Sat, 06 May 2017 (11:05 IST)
Updated Date: Sat, 06 May 2017 (11:07 IST)
ನಗರದಲ್ಲಿ ಇಂದಿನಿಂದ ಆರಂಭವಾಗಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತದ ಬಗ್ಗೆ ಪ್ರಸ್ತಾಪಿಸಬಾರದು ಎಂದು ಎರಡು ಬಣಗಳಿಗೆ ರಾಜ್ಯ ಉಸ್ತುವಾರಿ ಹೊತ್ತಿರುವ ಮುರಳಿಧರ್ ರಾವ್ ಎಚ್ಚರಿಕೆ ನೀಡಿದ್ದಾರೆ.
ಪಕ್ಷದಲ್ಲಿರುವ ಬಿಕ್ಕಟ್ಟಿನ ಬಗ್ಗೆ ಕಾರ್ಯಕಾರಿಣಿಯಲ್ಲಿ ಯಾರೂ ಮಾತನಾಡಬಾರದು.. ಪಕ್ಷದ ವರಿಷ್ಠರು ಬಿಕ್ಕಟ್ಟಿನ ವಿಚಾರವನ್ನು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಯಾರಾದ್ರೂ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ರೆ ಶಿಸ್ತು ಕ್ರಮ ಖಚಿತ.ಕಾರ್ಯಕಾರಿಣಿ ಸಭೆಯ ನಂತರ ಬಿಕ್ಕಟ್ಟು ಅಂತ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಕಾರ್ಯಕಾರಿಣಿಯಲ್ಲಿರುವ ಅಜೆಂಡಾದ ಬಗ್ಗೆ ಮಾತನಾಡಬೇಕು. ವೈಯಕ್ತಿಕ ವಿಚಾರಗಳನ್ನು ಯಾವುದೇ ಕಾರಣಕ್ಕೂ ಪ್ರಸ್ತಾಪಿಸಬಾರದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್ ಕಟ್ಟಪ್ಪಣೆ ಹೊರಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.