Publish Date: Thu, 12 Mar 2026 (20:37 IST)
Updated Date: Thu, 12 Mar 2026 (20:42 IST)
ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಕೊರತೆ ಸಂಬಂದ ರಾಜ್ಯದ ಸಂಸದರು ನ್ಯಾಯ ಒದಗಿಸಲಿ ಎಂದು ಡಿಕೆ ಶಿವಕುಮಾರ್ ಹೇಳಿದರು.
ಈ ಸಂಬಂಧ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರು ತೊಂದರೆ ಎದುರಿಸುತ್ತಿದ್ದಾರೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ ಎಂದರು.
ಇಂಧನ ಬೆಲೆ ಏರಿಕೆಯಿಂದ ಜನರು ಪರದಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರವು ವಿದೇಶಾಂಗ ನೀತಿಯ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾಗರಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೊ, ಈಗಾಗಲೇ ಗ್ಯಾಸ್ ಬಳಕೆಯ ಆಟೊಗಳು ಸಂಚಾರ ಸ್ಥಗಿತಗೊಂಡಿದ್ದು, ಸಮಸ್ಯೆಗಳು ಹೆಚ್ಚಾಗುತ್ತಿದೆ.