ಹೃದಯ ಸಂಬಂಧಿ ಕಾಯಿಲೆಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡಲು ಅತ್ಯಾಧುನಿಕ "ಕ್ಯಾಥ್‌ಲ್ಯಾಬ್"ನನ್ನು ನಾಗರಭಾವಿ ಫೊರ್ಟಿಸ್ ಆಸ್ಪತ್ರೆಯಲ್ಲಿ ಇಂದು ಆರಂಭಿಸಲಾಯಿತು. ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಹಠಾತ್ ಹೃದಯಾಘಾತ ಅಥವಾ ಗಂಭೀರ ಹೃದಯ ಸಂಬಂಧಿತ ಕಾಯಿಲೆ ಹೊಂದಿರುವವರಿಗೆ ಶೀಘ್ರವಾಗಿ ಚಿಕಿತ್ಸೆ ನೀಡುವುದು ಅತ್ಯವಶ್ಯಕವಾಗಿರುತ್ತದೆ. ಇಂತಹ ಪ್ರಕರಣದಲ್ಲಿ ಸಮಯ ಅತ್ಯಂತ ಅಮೂಲ್ಯವಾದದ್ದು. ಇದೀಗ ಫೋರ್ಟಿಸ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ಕ್ಯಾಥ್‌ಲ್ಯಾಬ್ ತೆರೆದಿರುವುದು ಅತ್ಯಂತ ಉಪಯುಕ್ತಕರವಾಗಿದೆ. ಇಂತಹ ಲ್ಯಾಬ್‌ಗಳ ಸಂಖ್ಯೆ ಹೆಚ್ಚಬೇಕು ಎಂದರು.