ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಹೃದಯಾಘಾತಕ್ಕೆ ಬಲಿ

ಶನಿವಾರ, 16 ನವೆಂಬರ್ 2019 (17:07 IST)
ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ದೆಹಲಿಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಗೋವಾ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿರೋ ಪ್ರಣಬ್ ನಂದಾ ಅವರು ದೆಹಲಿಗೆ ಅಧಿಕೃತ ಕಾರ್ಯದ ಮೇಲೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

1988 ರ ಬ್ಯಾಚ್ ನ ಭಾರತೀಯ ಪೊಲೀಸ್ ಸೇವೆಯ ಅಧಿಕಾರಿಯಾಗಿದ್ದ ಪ್ರಣಬ್ ನಂದಾ, ಬೇಹುಗಾರಿಕೆ ವಿಭಾಗದಲ್ಲೂ ಕಾರ್ಯನಿರ್ವಹಣೆ ಮಾಡಿದ್ದರು.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಕಾಲೇಜ್ ವಾಶ್ ರೂಂನಲ್ಲಿ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ : ಕಾರಣ ಕೇಳಿದ್ರೆ ಬೆಚ್ಚಿಬೀಳ್ತಿರಾ