ಬೆಂಗಳೂರು: ಲೋಕಸಭಾ ಚುನಾವಣೆಯ ಮತಗಟ್ಟಲೇ ಸಮೀಕ್ಷೆ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಮತ್ತು ಸಚಿವರಿಗೆ ಎದೆಬಡಿತ ಜೋರಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವ್ಯಂಗ್ಯ ಮಾಡಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇನ್ನೂ ವಾಲ್ಮೀಕಿ ನಿಗಮದ ಹಗರಣವು ಕೇವಲ ಸಚಿವರಿಗೆ ಸೀಮಿತವಾಗಿಲ್ಲ. ಈ ಪ್ರಕರಣದಲ್ಲಿ ದೊಡ್ಡವರ ಹೆಸರುಗಳು ಕೇಳಿಬರುತ್ತಿದ್ದು, ಶೀಘ್ರದಲ್ಲೇ ಸತ್ಯಾಂಶ ಹೊರಬೀಳುತ್ತದೆ. ಈ ಪ್ರಕರಣದಲ್ಲಿ ಎಸ್‍ಐಟಿಯಿಂದ ನ್ಯಾಯಯುತ ತನಿಖೆ ಅಸಾಧ್ಯ; ಆದ್ದರಿಂದ ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಣ್ಣದಲ್ಲ; ಇದರ ಆಳ ಮತ್ತು ಅಗಲ ಇನ್ನೂ ಹೆಚ್ಚಾಗಿದೆ. ಕೂಡಲೇ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಲು ನಾವು ಆಗ್ರಹಿಸಿದ್ದರೂ ಮುಖ್ಯಮಂತ್ರಿಗಳು ಇನ್ನೂ ಮನಸ್ಸು ಮಾಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ತೆಲಂಗಾಣಕ್ಕೆ ಹಣ ವರ್ಗಾವಣೆ, ನಕಲಿ ಕಂಪನಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾಯಿಸಿದ್ದು ಬಯಲಾಗಿದ್ದು ಸೂಕ್ತ ನಡೆಸಬೇಕೆಂದು ಆಗ್ರಹಿಸಿದರು.