Select Your Language

Notifications

webdunia
webdunia
webdunia
webdunia

ರಾಜ್ಯದ SC, ST ವಿದ್ಯಾರ್ಥಿಗಳೇ ಗಮನಿಸಿ

ರಾಜ್ಯದ SC, ST ವಿದ್ಯಾರ್ಥಿಗಳೇ ಗಮನಿಸಿ
bangalore , ಬುಧವಾರ, 9 ಮಾರ್ಚ್ 2022 (18:56 IST)
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು 31:03:2022 ರವರೆಗೆ ವಿಸ್ತರಿಸಲಾಗಿದೆ .
ಸಮಾಜ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು 31:03:2022 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಥವಾ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಂಚಾಯತ್ ಪ್ರತಿನಿಧಿಗಳ ವೇತನ ಹೆಚ್ಚಳ