Select Your Language

Notifications

webdunia
webdunia
webdunia
webdunia

ಕಾವೇರಿ ಜಲವಿವಾದದಲ್ಲಿ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ- ಕೋಟ ಶ್ರೀನಿವಾಸ

Kota Srinivasa
bangalore , ಗುರುವಾರ, 28 ಸೆಪ್ಟಂಬರ್ 2023 (19:26 IST)
ಕಾವೇರಿ ಜಲವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ನೀರಿನ ಸಮಸ್ಯೆಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಲು ವಿಫಲವಾದ ಸರ್ಕಾರ, ಜನರ ಹಿತಾಸಕ್ತಿ ಕಾಯುವಲ್ಲಿ ನಿರಾಸಕ್ತಿ ತೋರಿಸಿ, ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಕಾವೇರಿ ನದಿ ನೀರನ್ನು ಬಳಸಿ 1 ಲಕ್ಷ ಹೆಕ್ಟೆರ್ ನಷ್ಟು ಮಾತ್ರ ಕೃಷಿ ಮಾಡಲು ಅನುಮತಿ ಇದ್ದರೂ ಅಲ್ಲಿ 4 ಲಕ್ಷ ಹೆಕ್ಟೆರ್ ಕೃಷಿ ಮಾಡಲಾಗುತ್ತಿದೆ. ಇದನ್ನು ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡುವಲ್ಲಿ ವಿಫಲವಾಗಿದೆ. ಕೃಷಿಗಿಂತ  ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಬೇಕು ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಬೇಕಾಗಿತ್ತು ಎಂದವರು 

Share this Story:

Follow Webdunia kannada

ಮುಂದಿನ ಸುದ್ದಿ

ಗಜಪಡೆಯಲ್ಲಿ ಅರ್ಜುನ, ಭೀಮ ಬಲಶಾಲಿಗಳು !