Select Your Language

Notifications

webdunia
webdunia
webdunia
webdunia

ಮೇ 18 ರಿಂದ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ: ಯಡಿಯೂರಪ್ಪ

ಮೇ 18 ರಿಂದ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ: ಯಡಿಯೂರಪ್ಪ
ಬೆಳಗಾವಿ , ಸೋಮವಾರ, 8 ಮೇ 2017 (14:20 IST)
ಮೇ 18 ರಿಂದ ಪಕ್ಷ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಹಮ್ಮಿಕೊಳ್ಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಕಾಂಗ್ರೆಸ್ ಸರಕಾರದ ಬಗ್ಗೆ ಜನತೆ ಬೇಸತ್ತಿದ್ದಾರೆ. ಬರಗಾಲದಿಂದ ರೈತರು, ಜನಸಾಮಾನ್ಯರು ಕಂಗಾಲಾಗಿದ್ದರೂ ಸರಕಾರ ಅವರ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿದರು. 
 
ರೈತರು ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ ಖಚಿತ ಎಂದು ಭರವಸೆ ನೀಡಿದರು.
 
ಬಿಜೆಪಿ ರಾಷ್ಟ್ರೀಯ ನಾಯಕರು ಸರ್ವೇ ಆಧರಿಸಿ ಟಿಕೆಟ್ ಹಂಚಿಕೆ ಮಾಡಲಿದ್ದಾರೆ. ಆದ್ದರಿಂದ, ಬಿಜೆಪಿ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಜನಪರ ಕಾರ್ಯಗಳಿಗೆ ಚಾಲನೆ ನೀಡಿ ಎಂದು ಕರೆ ನೀಡಿದರು.
 
ಕೇಂದ್ರ ಸರಕಾರ ಆರ್ಥಿಕ ನೆರವು ನೀಡಿದರೂ ರಾಜ್ಯ ಸರಕಾರ, ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರಿಂದ ಜೀವ ಬೆದರಿಕೆ: ಎನ್‌.ಆರ್.ರಮೇಶ್