Daily Horoscope
✕

ಡಿಕೆಶಿ ಪರ ಕುಮಾರ್ ಬಂಗಾರಪ್ಪ ಹೇಳಿಕೆ?

Webdunia
ಶನಿವಾರ, 16 ಅಕ್ಟೋಬರ್ 2021 (15:11 IST)
ಬೆಂಗಳೂರು : ಡಿ.ಕೆ.ಶಿವಕುಮಾರ್ ಕುರಿತು ಕಾಂಗ್ರೆಸ್ ಪಕ್ಷದ ನಾಯಕರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ.
Photo Courtesy: Google

ಡಿಕೆಶಿ ಪರ ಮೃಧು ಧೋರಣೆಯಲ್ಲಿ ಮಾತನಾಡಿರುವ ಅವರು, ಡಿಕೆಶಿ ಭ್ರಷ್ಟಾಚಾರ ಮಾಡಿದ್ದಾರೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು. ಯಾವುದೇ ವೇದಿಕೆಗಳಲ್ಲಿ ಮಾತಾಡುವಾಗ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಈಗ ಕಾಂಗ್ರೆಸ್ ಪಕ್ಷದವರೇ ನಮಗೆ ಅಸ್ತ್ರ ಕೊಟ್ಟಿದ್ದಾರೆ, ಬಾಣ ಕೊಟ್ಟಿದ್ದಾರೆ. ನಮ್ಮ ಬಳಿ ಬಿಲ್ಲಿದೆ, ನಾವು ಬಾಣ ಪ್ರಯೋಗ ಮಾಡುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್ನ ಯಾವುದೇ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ನ.10ಕ್ಕೆ ಮಗಳ ಮದುವೆಗೆ ಆಹ್ವಾನಿಸಲು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಈ ವೇಳೆ ನನ್ನ ತಮ್ಮ ಮಧು ಅಲ್ಲಿಯೇ ಇದ್ದ. ಅವನನ್ನು ನೋಡಿ ಸಂತಸವಾಯ್ತು. ಸಿದ್ದರಾಮಯ್ಯ ಜತೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments