Publish Date: Thu, 11 May 2017 (16:17 IST)
Updated Date: Thu, 11 May 2017 (16:18 IST)
ಮುಂಬರುವ ಕೆಲ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಬರಪರಿಸ್ಥಿತಿ ಅಧ್ಯಯನ ಜೊತೆಗೆ ಸರಕಾರದ ವೈಫಲ್ಯಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಕೊಲೆ ಸುಲಿಗೆಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಮರಳು ಸಿಗದ ವಾತಾವರಣ ನಿರ್ಮಾಣವಾಗಿದೆ. ಲೋಕೋಪಯೋಗಿ ಖಾತೆಯ ,ಚಿವರ ಪುತ್ರನೇ ಮರಳು ಮಾರಾಟದಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಇದೊಂದು ನಾಚಿಕೆಗೇಡಿನ ಸರಕಾರ ಎಂದು ಕಿಡಿಕಾರಿದ್ದಾರೆ.
ಯಾವುದೇ ಇಲಾಖೆ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಕೇಂದ್ರ ಸರಕಾರದಿಂದ ಬಂದ ಅನುದಾನ ಸರಿಯಾಗಿ ವಿತರಣೆ ಮಾಡುತ್ತಿಲ್ಲ. ಇಂತಹ ಸರಕಾರವನ್ನು ಜನತೆ ಕಿತ್ತೊಗೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.