Select Your Language

Notifications

webdunia
webdunia
webdunia
webdunia

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಇದರೆ ತೆರವು

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಇದರೆ ತೆರವು
ಬೆಂಗಳೂರು , ಬುಧವಾರ, 15 ಡಿಸೆಂಬರ್ 2021 (18:45 IST)
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಸ್ಥಾಪಿಸಿದರೆ ಅವುಗಳನ್ನು ತೆರವುಗೊಳಿಸಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಮೌಖಿಕವಾಗಿ ಸೂಚಿಸಿದೆ.
 
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿದಲೂರು ಗ್ರಾಮ ಪಂಚಾಯತಿಯ ಬಸ್ ನಿಲ್ದಾಣದಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪನೆ ಪ್ರಶ್ನಿಸಿ ಕುವೆಂಪು ಒಕ್ಕಲಿಗರ ಸಂಘ ಮತ್ತು ಬಿದಲೂರು ಗ್ರಾಮದ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಆದೇಶ ನೀಡಿದೆ.ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆ ಸ್ಥಾಪಿಸುವುದಕ್ಕೆ ನಿಬರ್ಂಧವಿದೆ. ಅದು ದೇವರ ಮೂರ್ತಿಯಾಗಲಿ ಅಥವಾ ಮಹಾನ್ ವ್ಯಕ್ತಿಯ ಪ್ರತಿಮೆಯಾಗಲಿ ಸಾರ್ವಜನಿಕ ಸ್ಥಳದಲ್ಲಿ ಸ್ಥಾಪಿಸುವಂತಿಲ್ಲ. ಬೇಕಾದರೆ ಸ್ವಂತ ಜಾಗದಲ್ಲಿ ಪ್ರತಿಮೆ ಸ್ಥಾಪಿಸಿಕೊಳ್ಳಲಿ, ಆರಾಧಿಸಲಿ. ಅದಕ್ಕೆ ನ್ಯಾಯಾಲಯದ ಆಕ್ಷೇಪವಿಲ್ಲ ಎಂದಿತು.
 
ಅಲ್ಲದೆ, ಪ್ರಕರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಹೇಳುತ್ತಿದ್ದರೂ ತೆರವುಗೊಳಿಸದೆ ಸರಕಾರ ಏಕೆ ಸುಮ್ಮನಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆಯಿಂದ ಜನ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಇಂತಹ ಪ್ರಕರಣಗಳಿಗೆ ಅಂತ್ಯ ಕಾಣಿಸಬೇಕಿದೆ. ಸರಕಾರಿ ಸ್ಥಳದಲ್ಲಿ ಪ್ರತಿಮೆಗಳಿದ್ದರೆ ಮುಲಾಜಿಲ್ಲದೆ ತೆರವುಗೊಳಿಸಬೇಕೆಂದು ಮೌಖಿಕವಾಗಿ ಸೂಚಿಸಿ ವಿಚಾರಣೆ ಮುಂದೂಡಿತು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಕೊಳ್ಳಲು ಯೋಚಿಸಿದ್ದೀರಾ?: 10 ಗ್ರಾಂ. ಬಂಗಾರದ ಬೆಲೆ ಎಷ್ಟು ನೋಡಿ