Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪುನೀತ್ ಪ್ರತಿಮೆ

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪುನೀತ್ ಪ್ರತಿಮೆ
ಬೆಂಗಳೂರು , ಸೋಮವಾರ, 1 ನವೆಂಬರ್ 2021 (16:52 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅವರಣದಲ್ಲಿ ಇಂದು 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ವೇಳೆ ಮಾತನಾಡಿದ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತಾ, ಬೆಂಗಳೂರಿನ ನಾಗರಿಕರಿಗೆ 66ನೇ ಕನ್ನಡ ರಾಜ್ಯೋತ್ಸವ ಶುಭಾಶಯಗಳು ಮತ್ತು ಯುವಕರ ಆಶಾಕಿರಣ, ಪವರ್ ಸ್ಟಾರ್, ರಾಷ್ಟ ಪ್ರಶಸ್ತಿ ಪುರಸ್ಕೃತ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಹೊಂದಿರುವುದು ದುಖಃಕರ ಸಂಗತಿ. ರಾಜ್ಯಕ್ಕೆ ತುಂಬಾಲಾರದ ನಷ್ಟವಾಗಿದೆ.
ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದರು.
 
ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ಈಗಾಗಲೇ ಡಾ. ರಾಜ್ ಕುಮಾರ್ ಅವರ ಪ್ರತಿಮೆ ಇದೆ. ಅದರ ಪಕ್ಕದಲ್ಲೇ ದಿ.ಪುನೀತ್ ರಾಜ್ ಕುಮಾರ್ ರವರ ಕಂಚಿನ ಪ್ರತಿಮೆ ಸ್ಥಾಪಿಸಲು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜಕುಮಾರ್ ಸಾವಿಗೆ ತಮಿಳು ನಟರು ಬರಲಿಲ್ಲ.. ಪ್ರಥಮ್ ಕಿಡಿ