ಸ್ಟೀಲ್ ಬ್ರಿಡ್ಜ್ ನಿರ್ಮಾಣ ಪರಿಸರಕ್ಕೆ ಮಾರಕವಲ್ಲ. ಯೋಜನೆಗೆ ಅಡ್ಡಿಪಡಿಸದಂತೆ ಪರಿಸರವಾದಿಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ಬಿಡಿಎ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1791 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡಲಾಗುತ್ತಿದೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಮಾಡುವುದರಿಂದ ಪರಿಸರಕ್ಕೆ ಯಾವುದೇ ರಿತೀ ಹಾನಿ ಉಂಟಾಗುವುದಿಲ್ಲ. ಯೋಜನೆಗಾಗಿ ಸರಕಾರ ಸುಮ್ಮನೆ ಖರ್ಚು ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗುವುದರಿಂದ ಟ್ರಾಫಿಕ್ ಸಮಸ್ಯೆ ಕಡಿಮೆಯಾಗುತ್ತದೆ. ರಸ್ತೆಗಳನ್ನು ನಿರ್ಮಾಣ ಮಾಡುವಾಗ ಮರ ಕಡಿಯುವುದು ಅನಿವಾರ್ಯ. ಒಂದು ಮರ ಕಡಿದರೇ 10 ಸಸಿ ನೆಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿಎಂ ಫೇಸ್‌ಬುಕ್ ಪೇಜ್‌ಗೆ 2 ಲಕ್ಷ ಲೈಕ್ಸ್.......
ಸಿಎಂ ಫೇಸ್‌ಬುಕ್ ಪೇಜ್‌ಗೆ 2 ಲಕ್ಷ ಲೈಕ್ಸ್ ಬಂದಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಸಂತಸ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದನೆ ನೀಡುತ್ತಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ