Select Your Language

Notifications

webdunia
webdunia
webdunia
webdunia

ಸ್ಟೀಲ್‌ ಸೇತುವೆಯು ಬಿಜೆಪಿ ಸರ್ಕಾರದ 40% ದಂಧೆಯ ಅಕ್ರಮ ಶಿಶು

Steel bridge is the illegitimate child
bangalore , ಬುಧವಾರ, 24 ಆಗಸ್ಟ್ 2022 (19:22 IST)
ಬೆಂಗಳೂರಿನ ಶಿವಾನಂದ ವೃತ್ತದಲ್ಲಿ 39 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್‌ ಬ್ರಿಡ್ಜ್‌ ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆಯ ಅಕ್ರಮ ಶಿಶು ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ಹೇಳಿದರು.
 
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ ಶಿವಾನಂದ ವೃತ್ತದ ಸ್ಟೀಲ್‌ ಸೇತುವೆಯನ್ನು ಕಳಪೆ ಗುಣಮಟ್ಟದ ಬೇರಿಂಗ್, ಶಾಕ್‌ ಅಬ್ಸಾರ್ವರ್‌ ಬಳಸಿ ನಿರ್ಮಿಸಲಾಗಿದೆ. ಆಗಸ್ಟ್‌ 15ರಿಂದ ಒಂದು ಬದಿಯ ಸಂಚಾರ ಆರಂಭವಾಗಿದ್ದು, ಅಲ್ಲಿ ಸಂಚರಿಸಿದರೆ ಕಳಪೆ ಕಾಮಗಾರಿ ಸ್ಪಷ್ಟವಾಗುತ್ತಿದೆ. ಸೇತುವೆಯಲ್ಲಿ ಸುಮಾರು 20 ಮೀಟರ್‌ಗೊಮ್ಮೆ ಜಾಯಿಂಟ್‌ಗಳಿದ್ದು, ಅಲ್ಲಿ ವಾಹನಸವಾರರಿಗೆ ಕಿರಿಕಿರಿಯಾಗುವಂತಹ ಅವೈಜ್ಞಾನಿಕ ಹಂಪುಗಳನ್ನು ನಿರ್ಮಿಸಲಾಗಿದೆ. ಲಘು ವಾಹನ ಸಂಚರಿಸಿದರೂ ಸೇತುವೆಯು ವೈಬ್ರೇಟ್‌ ಆಗುತ್ತಿದೆ ಎಂದು ಆರೋಪಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಪಹರಣವಾಗಿದ್ದ ಬಾಲಕ ಗೋವಾದಲ್ಲಿ ಪತ್ತೆ