Publish Date: Thu, 18 Jun 2026 (18:52 IST)
Updated Date: Thu, 18 Jun 2026 (18:58 IST)
ಕಲಬುರಗಿ: 13 ವರ್ಷದ ಬಾಲಕಿಯ ಮೇಲೆ ಮಲತಂದೆಯೊಬ್ಬ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಆದೇಶವನ್ನು ಹೊರಡಿಸಿದೆ.
ನಗರದ ಸಬರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಡಾವಣೆಯೊಂದರಲ್ಲಿ 2025ರ ಜೂನ್ 14ರಂದು ರಾತ್ರಿ ಹೆಂಡತಿ ನಿದ್ರೆ ಮಾಡಿದ ಬಳಿಕ ಮಲತಂದೆಯು ಮಗಳನ್ನು ಬೇರೆ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಹೆಂಡತಿ ಎದ್ದು ನೋಡಿದಾಗ ಮಗಳು ಪತಿಯ ಕೊಠಡಿಯಲ್ಲಿದ್ದಳು. ಮಗಳ ಬಳಿ ತಾಯಿ ವಿಚಾರಣೆ ನಡೆಸಿದಾಗ, ನೀನು ಇಲ್ಲದ ವೇಳೆ ಮಲತಂದೆ ಐದಾರು ಬಾರಿ ಅತ್ಯಾಚಾರ ಮಾಡಿದ್ದಾನೆ ಎಂದು ಮಗಳು ಹೇಳಿದ್ದಾಳೆ. ಬಳಿಕ ತಾಯಿಯು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ನೀಡಿದ್ದಾರೆ.
ತನಿಖೆ ನಡೆಸಿದ ಪೊಲೀಸ್ ಇನ್‌ಸ್ಪೆಕ್ಟರ್ ಸಂತೋಷ ಎಲ್. ತಟ್ಟೆಪಳ್ಳಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್. ಚವ್ಹಾಣ್ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ತಿಂಗಳೊಳಗೆ ₹5 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶಿಸಿದ್ದಾರೆ.
ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ. ತುಪ್ಪದ ವಾದ ಮಂಡಿಸಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ