Webdunia - Bharat's app for daily news and videos

Install App

ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಬೊಮ್ಮಾಯಿ

Webdunia
ಭಾನುವಾರ, 27 ಫೆಬ್ರವರಿ 2022 (21:00 IST)
ಉಕ್ರೇನ್‌ನಲ್ಲಿ ಈಗಿನ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳಲಾಗುವುದು, ಕೇಂದ್ರ ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆ.ಸಿ. ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಬೆಂಗಳೂರಿಗೆ ಬಂದ ವಿದ್ಯಾರ್ಥಿಗಳು ನಿನ್ನೆ ದೆಹಲಿಯಲ್ಲಿ ಇದ್ದರು. ದೆಹಲಿಯ ಹೈ ಕಮಿಷನರ್​ಗೆ ಸೂಚನೆ ಕೊಟ್ಟಿದ್ದೆ. ಸೂಚನೆ ಮೇರೆಗೆ ಬೆಂಗಳೂರಿಗೆ ಬಂದಿದ್ದಾರೆ. ಮುಂಬೈಗೆ ಬಂದಿಳಿದಿರುವ ವಿದ್ಯಾರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣೆಯಿಂದ ವೆಚ್ಚವನ್ನು ಭರಿಸಲು ವ್ಯವಸ್ಥೆ ಮಾಡಲಾಗಿದೆ. ಅವರ ಪ್ರಯಾಣದ ವೆಚ್ಚವನ್ನು ಸರ್ಕಾರವೇ ಭರಿಸಿದೆ ಎಂದು ಹೇಳಿದರು.ಯುದ್ಧದ ಪರಿಸ್ಥಿತಿ ತಿಳಿಗೊಳ್ಳುವವರೆಗೆ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡುವ ಜೊತೆಗೆ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ರಾಜ್ಯದ ಅಧಿಕಾರಿಗಳು ಈ ನಿಟ್ಟಿನಲ್ಲಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆಂದು ತಿಳಿಸಿದರು.
 
ಹಲವು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ. ಉಕ್ರೇನ್‌ನಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಮೆಟ್ರೊ, ಬಂಕರ್‌ಗಳಲ್ಲಿ ಬಹಳಷ್ಟು ಜನರನ್ನು ಇರಿಸಿರುವುದು ಆತಂಕದ ವಿಚಾರವಾಗಿದೆ. ಉಕ್ರೇನ್‌ನ ಪಶ್ಚಿಮ ಭಾಗದಲ್ಲಿದ್ದ ವಿದ್ಯಾರ್ಥಿಗಳು ರೊಮೇನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ. ಮುಂಬೈ ಹಾಗೂ ದೆಹಲಿಗೆ ತಲುಪಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಕರೆತರಲಾಗಿದೆ. ವಿಪತ್ತು ನಿರ್ವಹಣಾ ಇಲಾಖೆಯಿಂದಲೇ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದರು.
 
ಕೆ.ಸಿ.ರೆಡ್ಡಿ ಪ್ರತಿಮೆಗೆ ಮಾಲಾರ್ಪಣೆ:
ಮಾಜಿ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಕೆ.ಸಿ.ರೆಡ್ಡಿ ಸರೋಜಮ್ಮ ವೆಲ್ ಫೇರ್ ಫೌಂಡೇಶನ್ ವತಿಯಿಂದ ಆಯೋಜಿಸಿದ ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಟಿ ಶರ್ಟ್ ಹಾಗೂ ಕೊಡೆಗಳನ್ನು ವಿತರಿಸಿದರು.
 
ದಿವಂಗತ ಕೆ.ಸಿ. ರೆರಡ್ಡಿ ಅವರ ಪುಣ್ಯತಿಥಿ ಅಂಗವಾಗಿ ಅವರ ಭಾವಚಿತ್ರಕ್ಕೆ ಭಾನುವಾರ ಪುಷ್ಪನಮನ ಸಲ್ಲಿಸಿದ ಅವರು, ‘ಇಂದಿನ ಯುವನಾಯಕರಿಗೆ ಕೆ.ಸಿ. ರೆಡ್ಡಿ ಅವರ ಬದುಕು ಮಾರ್ಗದರ್ಶಕವಾಗಿದೆ’ಎಂದರು.
 
ಪ್ರಥಮ ಮುಖ್ಯಮಂತ್ರಿಯಾಗಿದ್ದ ಕೆ.ಸಿ.ರೆಡ್ಡಿ ಅವರು ದೂರದೃಷ್ಟಿಯ, ಪ್ರಸ್ತುತ ಚಿಂತನೆಯ ನಾಯಕರಾಗಿದ್ದರು. ಕೆ.ಸಿ.ರೆಡ್ಡಿಯವರು ಹಾಕಿರುವ ಆಡಳಿತದ ಅಡಿಪಾಯದಿಂದ ಮೈಸೂರು ಸಂಸ್ಥಾನ ಹಾಗೂ ಕರ್ನಾಟಕ ರಾಜ್ಯವನ್ನು ಕಟ್ಟಲು ಸಾಧ್ಯವಾಯಿತು. ಅವರ ಆದರ್ಶಗಳು, ತತ್ವಗಳು, ಸಾರ್ವಜನಿಕ ಬದುಕಿನ ರೀತಿ, ಸಮಸ್ಯೆಗಳನ್ನು ಪರಿಹರಿಸುವ ಬಗೆ ಎಲ್ಲರಿಗೂ ಸ್ಫೂರ್ತಿಯಾಗಿದೆ. ಅವರ ಆಡಳಿತಾವಧಿಯಲ್ಲಿ ಪ್ರಾದೇಶಿಕ, ಸಾಮಾಜಿಕ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಬೇಕಿದೆ.
 
ಕೋಲಾರ ಜಿಲ್ಲೆಯ ಕೆ.ಸಿ. ರೆಡ್ಡಿಯವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಾಮ್ಯದ ಬಿಎಚ್‌ಐಎಲ್, ಬಿಎಂಎಲ್, ಎಚ್‌ಎಎಲ್ ಸೇರಿದಂತೆ ಹಲವು ಕೈಗಾರಿಕೆಗಳನ್ನು ರಾಜ್ಯದಲ್ಲಿ ಸ್ಥಾಪಿಸಲು ಕಾರಣರಾದರು. ಹೊಸ ತಂತ್ರಜ್ಞಾನದಿಂದ ಹೊಸ ಚಿಂತನೆಗೆ ನಾಂದಿ ಹಾಡಿದ್ದರು. ನಮ್ಮ ರಾಜ್ಯ ಐಟಿಬಿಟಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಹಕಾರಿಯಾಯಿತು.
 
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ.ಕೆ .ಸುಧಾಕರ್, ಕೆ.ಸಿ ರೆಡ್ಡಿ ಮೊಮ್ಮಗಳಾದ ವಸಂತ ಕವಿತಾ ರೆಡ್ಡಿ ಮತ್ತು ಪ್ರಶಸ್ತಿಯನ್ನು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments