ಆ ಸಚಿವರಿಗೆ ಇನ್ನೂ ಒಳ್ಳೆಯ ಖಾತೆ ಕೊಡಬೇಕಂತೆ!

Webdunia
ಬುಧವಾರ, 26 ಜೂನ್ 2019 (15:24 IST)
ಕಾಂಗ್ರೆಸ್ ನಲ್ಲಿ ಎಡಗೈ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಈ ಸಮುದಾಯದ ಆರ್.ಬಿ.ತಿಮ್ಮಾಪೂರ ಅವರಿಗೆ ಸಕ್ಕರೆ ಖಾತೆಯ ಜೊತೆಗೆ ಒಳನಾಡು ಸಾರಿಗೆ ಮತ್ತು ಬಂದರು ಖಾತೆಯಂತಹ ಉತ್ತಮ ಖಾತೆಯನ್ನು ನೀಡಬೇಕಂತೆ.

ಹೀಗಂತ ಒತ್ತಾಯಿಸಿ ಕಾಂಗ್ರೆಸ್ ಮಾದಿಗ ಮುಖಂಡರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ.

 
ರಾಜ್ಯದ ಪರಿಶಿಷ್ಟ ಜಾತಿ ಮತ್ತು ವರ್ಗಗಳಲ್ಲಿ ಎಡಗೈ ಮಾದಿಗ ಸಮುದಾಯದ ಜನಸಂಖ್ಯೆಯೇ ಹೆಚ್ಚಿದ್ದರೂ ಪಕ್ಷದಲ್ಲಿ ಈ ಸಮುದಾಯಕ್ಕೆ ಅನ್ಯಾಯಮಾಡಲಾಗುತ್ತಿದೆ. ಸರ್ಕಾರದಲ್ಲಿ ಆರ್.ಬಿ‌‌‌.ತಿಮ್ಮಾಪೂರ ಸೇರಿಸಿ ಒಟ್ಟು ಇಬ್ಬರು ಶಾಸಕರಿದ್ದು, ತಿಮ್ಮಾಪೂರ ಅವರಿಗೆ ಸಕ್ಕರೆ ಸಚಿವ ಸ್ಥಾನ ಮಾತ್ರ ನೀಡಲಾಗಿದೆ. ಒಳನಾಡು ಸಾರಿಗೆ ಮತ್ತು ಬಂದರು ಖಾತೆಯನ್ನು ತಿಮ್ಮಾಪೂರ ಅವರಿಗೆ ನೀಡಬೇಕೆಂದು ಎಐಸಿಸಿ ಶಿಫಾರಸು ಮಾಡಿ ಬಹಳ ದಿನಗಳೇ ಕಳೆದಿವೆ. ಹೀಗಿದ್ದಾಗ್ಯೂ ಅವರಿಗೆ ಉತ್ತಮ ಖಾತೆ ನೀಡಿಲ್ಲದ್ದನ್ನು ನೋಡಿದರೆ ಜಾತಿತಾರತಮ್ಯವಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮನವಿಯಲ್ಲಿ  ಸ್ಪಷ್ಟಪಡಿಸಲಾಗಿದೆ.

ಸಹೋದರ ಜಾತಿಯವರಾದ ಡಾ.ಜಿ.ಪರಮೇಶ್ವರ್ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ಪ್ರಿಯಾಂಕ್ ಖರ್ಗೆ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಹುದ್ದೆಯನ್ನು ನೀಡಲಾಗಿದೆ. ಆದ್ದರಿಂದ ಡಾ.ಜಿ.ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಆರ್.ಬಿ.ತಿಮ್ಮಾಪೂರ ಅವರಿಗೆ ಉತ್ತಮ‌ಖಾತೆ ಕೊಡಿಸಲು ಶಿಫಾರಸು ಮಾಡಬೇಕು ಎಂದು ಒತ್ತಾಯಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಕೇರಳದಲ್ಲಿ ಪಂಚಾಯತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ: ಅಚ್ಚರಿ ಬೆಳವಣಿಗೆ

ಮುಂದಿನ ಸುದ್ದಿ
Show comments