ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಲಾಠಿ ಚಾರ್ಜ್ ಮಾಡಿದ ಪೊಲೀಸರ ಮೇಲೆ ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ನಡೆಸಲಾಗಿದೆ.
ಇಂದು ಸಂಜೆಯವರೆಗೆ ಸರ್ಕಾರಕ್ಕೆ ರೈತರು ಡೆಡ್ ಲೈನ್ ಕೊಟ್ಟಿದ್ದರು. ಆದರೆ ಇದುವರೆಗೆ ಯಾವುದೇ ಬೆಳವಣಿಗೆಯಾಗಿಲ್ಲ. ಇದರಿಂದ ರೈತರು ರೊಚ್ಚಿಗೆದ್ದಿದ್ದಾರೆ. ಹೆದ್ದಾಗಿ ಬಂದ್ ಗೆ ರೈತರು ಮುಂದಾದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಈ ವೇಳೆ ಪೊಲೀಸರ ವಾಹನಗಳತ್ತ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ. ಆದರೆ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಮುಖಂಡ ಇಂಚಿಗೇರಿ ಶಶಿಕಾಂತ ಗುರೂಜಿ ಕಲ್ಲು ತೂರಾಟ ನಡೆಸಿದವರು ರೈತರಲ್ಲ ಎಂದಿದ್ದಾರೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, ಪೊಲೀಸರು ಸಂಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಲು ಹೋಗಬಾರದು ಎಂದಿದ್ದಾರೆ. ರೈತರೂ ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.