ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

Krishnaveni K
ಶುಕ್ರವಾರ, 7 ನವೆಂಬರ್ 2025 (16:20 IST)
ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಲಾಠಿ ಚಾರ್ಜ್ ಮಾಡಿದ ಪೊಲೀಸರ ಮೇಲೆ ಹತ್ತರಗಿ ಟೋಲ್ ಬಳಿ ಕಲ್ಲು ತೂರಾಟ ನಡೆಸಲಾಗಿದೆ.

ಇಂದು ಸಂಜೆಯವರೆಗೆ ಸರ್ಕಾರಕ್ಕೆ ರೈತರು ಡೆಡ್ ಲೈನ್ ಕೊಟ್ಟಿದ್ದರು. ಆದರೆ ಇದುವರೆಗೆ ಯಾವುದೇ ಬೆಳವಣಿಗೆಯಾಗಿಲ್ಲ. ಇದರಿಂದ ರೈತರು ರೊಚ್ಚಿಗೆದ್ದಿದ್ದಾರೆ. ಹೆದ್ದಾಗಿ ಬಂದ್ ಗೆ ರೈತರು ಮುಂದಾದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಈ ವೇಳೆ ಪೊಲೀಸರ ವಾಹನಗಳತ್ತ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ. ಆದರೆ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ರೈತ ಮುಖಂಡ ಇಂಚಿಗೇರಿ ಶಶಿಕಾಂತ ಗುರೂಜಿ ಕಲ್ಲು ತೂರಾಟ ನಡೆಸಿದವರು ರೈತರಲ್ಲ ಎಂದಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, ಪೊಲೀಸರು ಸಂಯಮದಿಂದ ವರ್ತಿಸಬೇಕು. ರೈತರ ಮೇಲೆ ಬಲಪ್ರಯೋಗ ಮಾಡಲು ಹೋಗಬಾರದು ಎಂದಿದ್ದಾರೆ. ರೈತರೂ ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಯಾಣದೂದ್ದಕ್ಕೂ ಯುವತಿ ಕೈ ಕಾಲು, ಮುಟ್ಟಿ ದೌರ್ಜನ್ಯ, ರ‍್ಯಾಪಿಡೋ ಬೈಕ್‌ ಸವಾರ ಅರೆಸ್ಟ್‌

ಭಯೋತ್ಪಾದನೆ ವಿಚಾರವಾಗಿ ಮತ್ತೇ ಪಾಕ್, ಅಫ್ಘಾನಿಸ್ತಾನ ನಡುವೆ ಮಾತುಕತೆ ವಿಫಲ

ವೋಟ್ ಚೋರಿ ಕಲ್ಪನೆಯ ಜನಕ ಯಾರೆಂದು ಎಸ್.ಸುರೇಶ್ ಕುಮಾರ್ ಪ್ರಶ್ನೆ

ಯಶಸ್ವಿ ರಾಜಕೀಯ ಜೀವನವನ್ನು ಹೊಂದಲು ಸುಳ್ಳು ಹೇಳುವುದು ಸರಿಯೇ: ರಾಹುಲ್ ಗಾಂಧಿಯನ್ನು ಕುಟುಕಿದ ರಾಜನಾಥ್ ಸಿಂಗ್

ಉಪರಾಷ್ಟ್ರಪತಿ ರಾಧಾಕೃಷ್ಣನ್‌ ರಾಜ್ಯದ ಮೊದಲ ಭೇಟಿಯಲ್ಲೇ ಹಲವು ಮಹತ್ವದ ಕಾರ್ಯಕ್ರಮ

ಮುಂದಿನ ಸುದ್ದಿ
Show comments