Select Your Language

Notifications

webdunia
webdunia
webdunia
webdunia

ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ, ನಾಲ್ವರಿಗೆ ಗಾಯ

Ramanavami Procession

Sampriya

ಕೋಲ್ಕತ್ತ: , ಗುರುವಾರ, 18 ಏಪ್ರಿಲ್ 2024 (14:14 IST)
Photo Courtesy X
ಕೋಲ್ಕತ್ತ: ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ರಾತ್ರಿ  9.10ರ ಸುಮಾರಿಗೆ ಎಗ್ರಾದ ಸಮೀಪ ಮೆರವಣಿಗೆ ಸಾಗುತ್ತಿದ್ದಾಗ ಏಕಾಏಕಿ ಕಲ್ಲು ತೂರಾಟ ನಡೆಯುತ್ತಿದ್ದು,  ಘಟನೆ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆ ಖಂಡಿಸಿ, ಬಿಜೆಪಿ ನಾಯಕಿ ಹಾಗೂ ಮೇದಿನಿಪುರದ ಅಭ್ಯರ್ಥಿ ಅಗ್ನಿಮಿತ್ರ ಪೌಲ್, ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಮಮತಾ ಬ್ಯಾನರ್ಜಿ, 'ರಾಮ ನವಮಿ ಆಚರಣೆ ವೇಳೆ ಬಿಜೆಪಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದೆ' ಎಂದು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿ BJP ಅಧಿಕಾರಕ್ಕೆ ಬರೋದಿಲ್ಲ, ಕೇಂದ್ರದಲ್ಲಿ INDIA ಅಧಿಕಾರಕ್ಕೆ: ಸಿ.ಎಂ.ಸಿದ್ದರಾಮಯ್ಯ ಕರೆ