Publish Date: Fri, 03 Nov 2017 (16:56 IST)
Updated Date: Fri, 03 Nov 2017 (17:06 IST)
ಬಿಜೆಪಿಯ ಅತೃಪ್ತ ಮುಖಂಡರು ಪಕ್ಷದ ಪರಿವರ್ತನಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ.
ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ನಾಗೇಶ್ ಚೌಧರಿ ಮತ್ತು ಅವರ ಬೆಂಬಲಿಗರು ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪನವರ ಮೇಲಿನ ಸಿಟ್ಟಿನಿಂದಾಗಿ ಇಂತಹ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತುಮಕೂರಿನ ತರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ರಥದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಬಿಜೆಪಿ ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚದುರಿಸಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ತಿಳಿಗೊಂಡಿದೆ ಎನ್ನಲಾಗುತ್ತಿದೆ.
ಮತ್ತೊಬ್ಬ ಬಿಜೆಪಿ ಮುಖಂಡರು ಮಾತನಾಡಿ ರಥಯಾತ್ರೆಯ ಮೇಲೆ ಯಾವುದೇ ಕಲ್ಲು ತೂರಾಟ ನಡೆದಿಲ್ಲ. ಇವೆಲ್ಲಾ ಉಹಾಪೋಹ ವರದಿಗಳು ಎಂದು ಸ್ಪಷ್ಟನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.