Daily Horoscope
✕

ಅತೃಪ್ತ ಮುಖಂಡರಿಂದ ಬಿಜೆಪಿ ರಥದ ಮೇಲೆ ಕಲ್ಲು ತೂರಾಟ

Webdunia
ಶುಕ್ರವಾರ, 3 ನವೆಂಬರ್ 2017 (16:56 IST)
ಬಿಜೆಪಿಯ ಅತೃಪ್ತ ಮುಖಂಡರು ಪಕ್ಷದ ಪರಿವರ್ತನಾ ಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. 




ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಂಡ ನಾಗೇಶ್ ಚೌಧರಿ ಮತ್ತು ಅವರ ಬೆಂಬಲಿಗರು ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಬಿ.ಎಸ್.ಯಡಿಯೂರಪ್ಪನವರ ಮೇಲಿನ ಸಿಟ್ಟಿನಿಂದಾಗಿ ಇಂತಹ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತುಮಕೂರಿನ ತರುವೇಕೆರೆ ತಾಲೂಕಿನ ಬಾಣಸಂದ್ರದಲ್ಲಿ ರಥದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
 
ಬಿಜೆಪಿ ರಥಯಾತ್ರೆಯ ಮೇಲೆ ಕಲ್ಲು ತೂರಾಟ ನಡೆಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಗುಂಪು ಚದುರಿಸಲು ಪ್ರಯತ್ನಿಸಿದ್ದಾರೆ. ಪರಿಸ್ಥಿತಿ ತಿಳಿಗೊಂಡಿದೆ ಎನ್ನಲಾಗುತ್ತಿದೆ.
 
ಮತ್ತೊಬ್ಬ ಬಿಜೆಪಿ ಮುಖಂಡರು ಮಾತನಾಡಿ ರಥಯಾತ್ರೆಯ ಮೇಲೆ ಯಾವುದೇ ಕಲ್ಲು ತೂರಾಟ ನಡೆದಿಲ್ಲ. ಇವೆಲ್ಲಾ ಉಹಾಪೋಹ ವರದಿಗಳು ಎಂದು ಸ್ಪಷ್ಟನೆ ನೀಡಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳ ಗೊಡ್ಡು ಬೆದರಿಕೆಗೆ ಹೆದರಲ್ಲ: ಆರ್.ಆಶೋಕ್

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments