Publish Date: Fri, 06 Oct 2017 (18:41 IST)
Updated Date: Fri, 06 Oct 2017 (18:43 IST)
ಕಳೆದ ಮಂಗಳವಾರದಂದು ಹತ್ಯೆಯಾಗಿದ್ದ ಬಿಜೆಪಿ ಕಾರ್ಯಕರ್ತ ಜುಬೈರ್ ನಿವಾಸಕ್ಕೆ ಭೇಟಿ ನೀಡಲು ಆಗಮಿಸಿದ ಸಚಿವ ಯು.ಟಿ.ಖಾದರ್ ಕಾರಿನ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟಕ್ಕೆ ಯತ್ನ ನಡೆಸಿದ ಘಟನೆ ವರದಿಯಾಗಿದೆ.
ಜುಬೈರ್ ಹತ್ಯೆಯಾದಾಗ ಮೃತದೇಹ ನೋಡಲು ಬಾರದ ಸಚಿವ ಖಾದರ್, ಇದೀಗ ಜುಬೇರ್ ನಿವಾಸಕ್ಕೆ ಭೇಟಿ ನೀಡುತ್ತಿರುವುದು ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿತ್ತು ಎಂದು ಮೂಲಗಳು ತಿಳಿಸಿವೆ.
ಜುಬೈರ್ ನಿವಾಸಕ್ಕೆ ಭೇಟಿ ನೀಡಿ ಸಚಿವ ಖಾದರ್ ಕಾರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಘೋಷಣೆಗಳನ್ನು ಕೂಗಿದಾಗ ಬೇರೆ ದಾರಿ ಕಾಣದೆ ಸಚಿವ ಖಾದರ್, ಬೇರೆ ಕಾರಿನಲ್ಲಿ ತೆರಳಿದರು ಎನ್ನಲಾಗಿದೆ.
ಸಚಿವ ಖಾದರ್ ತೆರಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಗುಂಪು ಚಪ್ಪಾಳೆ ತಟ್ಟಿ ತಮ್ಮ ಹೋರಾಟವನ್ನು ಸಮರ್ಥಿಸಿಕೊಂಡಿತು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.