Select Your Language

Notifications

webdunia
webdunia
webdunia
webdunia

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಸತೀಶ್‌ಗೆ ಜಾಮೀನು

Udayagiri Police Station, Accused Satish, Mysore City

Sampriya

ಮೈಸೂರು , ಸೋಮವಾರ, 17 ಫೆಬ್ರವರಿ 2025 (19:52 IST)
Photo Courtesy X
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಹಾಗೂ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋಧನೆ ನೀಡಿದ್ದು ಆರೋಪಿ ಸತೀಶ್ ಹಾಕಿದ್ದ ಪೋಸ್ಟ್‌.

ಇದೇ ಫೆಬ್ರವರಿ 10ರಂದು ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು.

 ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು. ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸತೀಶ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಚ್‌ಡಿಕೆ ವಿರುದ್ಧ ಭೂಮಿ ಒತ್ತುವರಿ ಆರೋಪ: ಕಂದಾಯ ಅಧಿಕಾರಿಗಳಿಂದ ಸರ್ವೇ