Webdunia - Bharat's app for daily news and videos

Install App

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ: ವಿವಾದಾತ್ಮಕ ಪೋಸ್ಟ್ ಹಾಕಿದ್ದ ಸತೀಶ್‌ಗೆ ಜಾಮೀನು

Sampriya
ಸೋಮವಾರ, 17 ಫೆಬ್ರವರಿ 2025 (19:52 IST)
Photo Courtesy X
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಹಾಗೂ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.

ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಉದಯಗಿರಿ ಪೊಲೀಸ್ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋಧನೆ ನೀಡಿದ್ದು ಆರೋಪಿ ಸತೀಶ್ ಹಾಕಿದ್ದ ಪೋಸ್ಟ್‌.

ಇದೇ ಫೆಬ್ರವರಿ 10ರಂದು ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು.

 ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು. ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸತೀಶ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments