Select Your Language

Notifications

webdunia
webdunia
webdunia
webdunia

ಎರಡನೆಯ ದಿನಕ್ಕೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ!

ಎರಡನೆಯ ದಿನಕ್ಕೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ!
ಬೆಂಗಳೂರು , ಮಂಗಳವಾರ, 26 ಜುಲೈ 2016 (10:40 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಎರಡನೆಯ ದಿನಕ್ಕೂ ಮುಂದುವರೆದಿದೆ. 
 
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಚಾಮರಾಜನಗರದ ಡಿಪೋದಿಂದ ಹೊರಡಬೇಕಿದ್ದ 490 ಬಸ್‌ಗಳು ನಿಂತಲ್ಲೇ ನಿಂತಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮುಂಚಾಗ್ರತಾ ಕ್ರಮವಾಗಿ ಇಂದು ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
ಮುಷ್ಕರವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ ಹಾಗೂ ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿವೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. 
 
ಖಾಸಗಿ ಬಸ್‌ ಹಾಗೂ ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿದ್ದು, ಈ ಕುರಿತು ಸಾರ್ವಜನಿಕರು ದೂರು ನೀಡಿದರೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಸ್‌ಐ ರೂಪಾ ಆತ್ಮಹತ್ಯೆ ಯತ್ನ ಕೇಸ್: ಇನ್ಸ್‌ಪೆಕ್ಟರ್ ಸಂಜೀವ್ ಗೌಡ ವರ್ಗಾವಣೆ