Webdunia - Bharat's app for daily news and videos

Install App

ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ಖಾತೆ ನಿರ್ವಹಣೆ ಮಾಡಿ: ಚೆಲುವರಾಯಸ್ವಾಮಿಗೆ ಆರ್‌ ಅಶೋಕ್‌ ಕ್ಲಾಸ್‌

Sampriya
ಶನಿವಾರ, 8 ಫೆಬ್ರವರಿ 2025 (12:20 IST)
Photo Courtesy X
ಬೆಂಗಳೂರು: ಸ್ವಾಮಿ ಸಚಿವ ಎನ್‌ ಚೆಲುವರಾಯಸ್ವಾಮಿ ಅವರೇ, ಮಾಧ್ಯಮಗಳ ಮುಂದೆ ಬಾಯಿಗೆ ಬದಂತೆ ಬಡಬಡಾಯಿಸುವುದು ಬಿಟ್ಟು ತಮ್ಮ ಖಾತೆ ನಿರ್ವಹಣೆ ಬಗ್ಗೆ ಸ್ವಲ್ಪ ಗಮನ ಕೊಡಿ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ.  

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಷ್ಟಕ್ಕೂ ತಮ್ಮ ಖಾತೆ ಯಾವುದು ಎಂದು ತಮಗೆ ನೆನಪಿದೆಯೇ ಚಲುವರಾಯಸ್ವಾಮಿ ಅವರೇ? ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಇರಬೇಕೋ ಅಥವಾ ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುತಿಸಿಕೊಳ್ಳಬೇಕೋ ಎಂಬ ತ್ರಿಶಂಕು ಸ್ಥಿತಿಯಲ್ಲಿರುವ ತಮಗೆ, ಸಂಪುಟ ಪುನಾರಚನೆ ಆದರೆ ಅಥವಾ ಮುಖ್ಯಮಂತ್ರಿ ಬದಲಾದರೆ ತಮ್ಮ ಕುರ್ಚಿ ಉಳಿಯುತ್ತದೆಯೋ ಇಲ್ಲವೋ ಎಂಬ ಗೊಂದಲದಲ್ಲಿ ಇರುವ
ತಮಗೆ ಪಾಪ ತಮ್ಮ ಖಾತೆ, ತಮ್ಮ ಕರ್ತವ್ಯದ ಬಗ್ಗೆ ಹೇಗೆ ನೆನಪಿರಲು ಸಾಧ್ಯ.

ತಾವು ಜವಾಬ್ದಾರಿ ಹೊತ್ತಿರುವ ಖಾತೆ ಎಂತಹದ್ದು, ಅದರ ಪ್ರಾಮುಖ್ಯತೆ ಏನು, ಗಂಭೀರತೆ ಏನು, ಆ ಇಲಾಖೆಯನ್ನ ಈ ಹಿಂದೆ ಎಂತೆಂತಹ ಮುತ್ಸದ್ಧಿ ನಾಯಕರು ನಿರ್ವಹಿಸಿದ್ದರು ಎಂಬ ಕನಿಷ್ಠ ಅರಿವಾದರೂ ತಮಗಿದೆಯೇ? ಇಷ್ಟಕ್ಕೂ ಕಳೆದ 20 ತಿಂಗಳಲ್ಲಿ ಕೃಷಿ ಸಚಿವರಾಗಿ ತಮ್ಮ ಸಾಧನೆಯಾದರೂ ಏನು?

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಕಳೆದ 20 ತಿಂಗಳುಗಳಲ್ಲಿ ರಾಜ್ಯದ 3,000 ರೈತರು ಆತ್ಮಹತ್ಯೆಗೆ ಶರಣಾಗಿದ್ದರೂ ತಮಗೆ ಕಳಕಳಿ ಇಲ್ಲ.

ಬರ, ನೆರೆ ಬಂದಾಗ ಸಮಯಕ್ಕೆ ಸರಿಯಾಗಿ ರೈತರಿಗೆ ಪರಿಹಾರ ಕೊಡಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆ ಇಲ್ಲ.

ಸಕಾಲಕ್ಕೆ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲು ನಿಮ್ಮ ಕೈಲಾಗಲಿಲ್ಲ. ನಾನು ಮಧ್ಯಪ್ರವೇಶ ಮಾಡಿ 24 ಗಂಟೆಯೊಳಗೆ ಖರೀದಿ ಕೇಂದ್ರ ತೆರೆಯದಿದ್ದರೆ ಬೀಗ ಜಡಿಯಬೇಕಾಗಿತ್ತದೆ ಎಂದು ಎಚ್ಚರಿಕೆ ಕೊಟ್ಟ ಮೇಲೆ ಎಚ್ಚೆತ್ತುಕೊಂಡಿದ್ದೀರಿ. ಇದು ನಿಮ್ಮ ಸರ್ಕಾರ ಯೋಗ್ಯತೆ.

ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ಇಲ್ಲ.

ತೊಗರಿ ಖರೀದಿ ಕೇಂದ್ರ ಆರಂಭಿಸಲು ವಿಳಂಬವಾದ ಕಾರಣ ಉತ್ತರ ಕರ್ನಾಟಕದ ರೈತರು ಸಿಕ್ಕಷ್ಟು ಬೆಲೆಗೆ ತೊಗರಿ ಮಾರಿ ನಷ್ಟ ಅನುಭವಿಸುತ್ತಿದ್ದರೂ ತಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ನಿಮ್ಮ ಕಾರ್ಯವೈಖರಿ.

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ದಿನಬೆಳಗಾದರೆ ರೈತರು ಆತಹತ್ಯಗೆ ಶರಣಾಗುತ್ತಿದ್ದರೂ, ಅವರ ಸಮಸ್ಯೆ ಬಗೆಹರಿಸುವುದು ಇರಲಿ, ಕನಿಷ್ಠ ಪಕ್ಷ ತಮ್ಮ ತವರು ಜಿಲ್ಲೆಯ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಸೌಜನ್ಯವೂ ತಮಗಿಲ್ಲ. ಮೊನ್ನೆ ನಾನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶ್ರೀಮತಿ ಪ್ರೇಮ ಹಾಗು ಅವರ ಮಗ ಶ್ರೀ ರಂಜಿತ್ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಸಹಾಯಧನ ನೀಡಿದ ಮೇಲೆ ಪಾಪ ತಮಗೆ ಜ್ಞಾನೋದಯವಾಗಿದೆ.

ಈಗಿರುವ ಕಾನೂನಿನ ಚೌಕಟ್ಟಿನಲ್ಲಿಯೇ ಮೈಕ್ರೋ ಫೈನಾನ್ಸ್ ಕಂಪನಿಗಳ ಸಮಸ್ಯೆಗೆ ಕಡಿವಾಣ ಹಾಕಬಹುದು ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ? ರಾಜ್ಯಪಾಲರ ಅಭಿಪ್ರಾಯದ ಬಗ್ಗೆ ತಮ್ಮ ಸರ್ಕಾರಕ್ಕೆ ತಕರಾರಿದ್ದರೆ ಅವರಿಗೆ ಪತ್ರ ಬರೆದು, ಅವರನ್ನ ಭೇಟಿಯಾಗಿ ಮನವರಿಕೆ ಮಾಡಿಕೊಡಿ. ಅದು ಬಿಟ್ಟು ಸಾಂವಿಧಾನಿಕ ಹುದ್ದೆಯಲ್ಲಿರುವವರ ಮೇಲೆ ರಾಜಕೀಯ ಟೀಕೆ ಮಾಡುವುದು, ಬಿಜೆಪಿ ವಕ್ತಾರರು ಎಂದು ಆಪಾದನೆ ಮಾಡುವುದು ಎಷ್ಟು ಸರಿ?

ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರಗಳಿದ್ದಾಗ ಯಾವ್ಯಾವ ರಾಜ್ಯದ ರಾಜ್ಯಪಾಲರು ಹೇಗೆ ನಡೆದುಕೊಂಡಿದ್ದಾರೆ ಎಂಬ ಇತಿಹಾಸ ಇಡೀ ದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ. ಈ ರೀತಿ ಅನಾವಶ್ಯಕ ಹೇಳಿಕೆಗಳನ್ನು ಕೊಟ್ಟು ಟೈಂಪಾಸ್ ಮಾಡುವ ಬದಲು ತಮ್ಮ ಇಲಾಖೆಯ ಕೆಲಸ ನಿರ್ವಹಣೆ ಮಾಡುವ ಕಡೆ ಗಮನ ಕೊಡಿ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ತಮ್ಮ ಕರ್ತವ್ಯ ಪಾಲಿಸಿ ಮತದಾರರ ಋಣ ತೀರಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ

Video: ಟ್ರೈನ್ ನ ಅಪ್ಪರ್ ಬರ್ತ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ರೊಮ್ಯಾನ್ಸ್: ಶಾಕ್ ಆದ ಪ್ರಯಾಣಿಕರು

Shocking video: ಚಲಿಸುತ್ತಿರುವ ಕಾರಿನ ಮುಂದೆಯೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಮುಂದಿನ ಸುದ್ದಿ
Show comments